ADVERTISEMENT

ರೈತರ ಹೋರಾಟಕ್ಕೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 11:20 IST
Last Updated 3 ಡಿಸೆಂಬರ್ 2020, 11:20 IST
ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ (ಸಂ)ದಿಂದ ಗುರುವಾರ ನಡೆದ ಧರಣಿ ವೇಳೆ ಅಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿದರು
ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ (ಸಂ)ದಿಂದ ಗುರುವಾರ ನಡೆದ ಧರಣಿ ವೇಳೆ ಅಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿದರು   

ಬೆಳಗಾವಿ: ದೆಹಲಿಯಲ್ಲಿ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ರೈತ ಸಂಘಟನೆಯವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.

‘ರಾಷ್ಟ್ರ ರಾಜಧಾನಿಯಲ್ಲಿ ಹೋರಾಟನಿರತ ರೈತರ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ. ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಕೂಡಲೇ ಗೌರವ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಅಧ್ಯಕ್ಷ ಸಿದಗೌಡ ಮೋದಗಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ADVERTISEMENT

ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗಣಿಕರ, ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಾಳಾಸಾಹೇಬ ಉದಗಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಮೀರಾ ಬೀರನ್ನವರ, ಖಾನಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಅರ್ಜುನ ಗಾವುಡ, ನೂರಪ್ಪ ಮಾದರ, ನೇಕಾರರ ಸಂಘದ ಸೋಮು, ರವಿ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.