ADVERTISEMENT

‘ಜನಪರವಾಗಿದ್ದ ಸುರೇಶ ಅಂಗಡಿ’

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 10:51 IST
Last Updated 24 ಸೆಪ್ಟೆಂಬರ್ 2020, 10:51 IST
ಗೋಕಾಕದ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಗುರುವಾರ ಅರಭಾವಿ ಬಿಜೆಪಿ ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಚಿವ ಸುರೇಶ ಅಂಗಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು
ಗೋಕಾಕದ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಗುರುವಾರ ಅರಭಾವಿ ಬಿಜೆಪಿ ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಚಿವ ಸುರೇಶ ಅಂಗಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು   

ಗೋಕಾಕ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಗುರುವಾರ ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖಂಡರು ಫೋಟೊಗೆ ಪೂಜೆ ಸಲ್ಲಿಸಿ ಮೌನ ಆಚರಿಸಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ‘ಅಂಗಡಿ ಅವರ ನಿಧನದಿಂದ ಇಡೀ ದೇಶಕ್ಕೆ ನಷ್ಟವಾಗಿದೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ಕಾರ್ಯಕರ್ತರೊಂದಿಗೆ ಸದಾ ಒಡನಾಟ ಹೊಂದಿದ್ದರು’ ಎಂದು ನೆನೆದರು.

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ‘ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಸಾಕಷ್ಟು ಮಹಾತ್ವಾಕಾಂಕ್ಷೆ ಹೊಂದಿದ್ದರು. ಜಿಲ್ಲೆಯ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದರು. ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ಹಾನಿಯಾಗಿದೆ’ ಎಂದು ಕಂಬನಿ ಮಿಡಿದರು.

ADVERTISEMENT

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಜಿಲ್ಲಾ ಘಟಕದ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಪಿಕಾರ್ಡ್‌ ಬ್ಯಾಂಕ್ ನಿರ್ದೇಶಕ ಸುಬಾಷ ಪಡದಲ್ಲಿ, ಪ್ರಭಾ ಶುಗರ್ಸ್ ನಿರ್ದೇಶಕ ಮಾಳಪ್ಪ ಜಾಗನೂರ, ಲಕ್ಕಪ್ಪ ಲೋಕುರಿ, ದಾಸಪ್ಪ ನಾಯಿಕ, ಮುಖಂಡರಾದ ನಾಗಪ್ಪ ಮಂಗಿ, ಪರಸಪ್ಪ ಗುಡೆನ್ನವರ, ಅಡಿವೆಪ್ಪ ಅಳಗೋಡಿ, ಭೀಮಶಿ ಮೋಕಾಶಿ, ಪದಾಧಿಕಾರಿಗಳಾದ ಲಕ್ಷ್ಮೀ ಮಾಳೇದ, ಕಮಲಾದೇವಿ ಬಡಗಾಂವಿ, ಸಿದ್ದು ಯಕ್ಕುಂಡಿ, ಸಿದ್ಧಾರೂಢ ಜಮನಾಳ, ಮಂಗಲಾ ಕೌಜಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.