ADVERTISEMENT

ಬೆಳೆ ಹಾನಿ ಕುರಿತು ಶೀಘ್ರವೇ ವರದಿ ಸಲ್ಲಿಕೆ: ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 10:31 IST
Last Updated 17 ಅಕ್ಟೋಬರ್ 2020, 10:31 IST
ತೆಲಸಂಗ ಗ್ರಾಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ, ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ, ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ ಮಳೆಯಿಂದ ಬೆಳೆ ಹಾನಿಯಾಗಿರುವುದನ್ನು ಶನಿವಾರ ವೀಕ್ಷಿಸಿದರು
ತೆಲಸಂಗ ಗ್ರಾಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ, ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ, ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ ಮಳೆಯಿಂದ ಬೆಳೆ ಹಾನಿಯಾಗಿರುವುದನ್ನು ಶನಿವಾರ ವೀಕ್ಷಿಸಿದರು   

ತೆಲಸಂಗ: ‘ಗಾಳಿ–ಮಳೆಯಿಂದಾದ ಬೆಳೆ ಹಾನಿ ಕುರಿತು ಸಂಪೂರ್ಣ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು’ ಎಂದು ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ ತಿಳಿಸಿದರು.

ಇಲ್ಲಿ ಹಾನಿಯಾದ ಬೆಳೆಗಳನ್ನು ಶನಿವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮೀಕ್ಷೆ ನಡೆಸಲಾಗುತ್ತಿದೆ. ತೊಗರಿ ಬೆಳೆಗಾರರಿಗೆ ನಷ್ಟವಾಗಿದ್ದು ಕಂಡು ಬರುತ್ತಿದೆ. ನೀರು ಸಂಗ್ರಹವಾದ ಜಮೀನಿನಲ್ಲಿ ತೊಗರಿ ಸಂಪೂರ್ಣ ಹಾನಿಗೊಳಗಾಗಿದೆ. ರೈತರಿಗಾದ ನಷ್ಟದ ವಾಸ್ತವ ವರದಿ ನೀಡಲಾಗುವುದು’ ಎಂದರು.

ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ, ‘ಹೋಬಳಿಯಲ್ಲಿ ತೊಗರಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ. ಸದ್ಯ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ಹೇಳಿದರು.

ADVERTISEMENT

ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ, ಕೃಷಿ ಸಹಾಯಕರಾದ ಕೆ.ಡಿ. ಹುಣಸಿಕಟ್ಟಿ, ಪಿ.ಎಂ. ವಾಲಿ, ಕಾಮಗೊಂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.