ಬೆಳಗಾವಿ: ಇಲ್ಲಿನ ನೆಹರು ನಗರದ ಖಾಸಗಿ ಆಸ್ಪತ್ರೆಯ 4ನೇ ಮಹಡಿಯಿಂದ ಜಿಗಿದು ಬಿದ್ದು ವೃದ್ಧರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
‘72 ವರ್ಷದ ವ್ಯಕ್ತಿಯನ್ನು ನಗರದ ವಡಗಾವಿಯವರು ಎಂದು ಗುರುತಿಸಲಾಗಿದೆ. ಅವರಿಗೆ ಕೋವಿಡ್ ಸೋಂಕಿನ ಶಂಕೆ ಇತ್ತು. ಭಯದಿಂದ ಈ ರೀತಿ ಮಾಡಿಕೊಂಡಿರಬಹುದು’ ಎಂದು ಪೊಲೀಸರು ತಿಳಿಸಿದರು.
ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.