ADVERTISEMENT

ಚಳಿಗಾಲದ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಜ್ಜು

ಭರದಿಂದ ಸಾಗಿವೆ ಅಂತಿಮ ಹಂತದ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2023, 4:48 IST
Last Updated 2 ಡಿಸೆಂಬರ್ 2023, 4:48 IST
ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನಸಭೆ ಸಭಾಂಗಣದಲ್ಲಿರುವ ಪೀಠೋಪಕರಣಗಳನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿರುವುದು– ಪ್ರಜಾವಾಣಿ ಚಿತ್ರ:ಇಮಾಮ್‌ಹುಸೇನ್‌ ಗೂಡುನವರ
ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನಸಭೆ ಸಭಾಂಗಣದಲ್ಲಿರುವ ಪೀಠೋಪಕರಣಗಳನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿರುವುದು– ಪ್ರಜಾವಾಣಿ ಚಿತ್ರ:ಇಮಾಮ್‌ಹುಸೇನ್‌ ಗೂಡುನವರ   

ಬೆಳಗಾವಿ: ಡಿಸೆಂಬರ್‌ 4ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶ ಆರಂಭವಾಗಲಿದ್ದು, ಇದಕ್ಕೆ ಪೂರಕವಾಗಿ ಸಕಲ ಸಿದ್ಧತೆಗಳು ನಡೆದಿವೆ. ವಿಧಾನಸಭೆ, ವಿಧಾನ ಪರಿಷತ್‌ ಸಭಾಂಗಣ, ಮುಖ್ಯಮಂತ್ರಿ, ವಿವಿಧ ಖಾತೆಗಳ ಸಚಿವರ ಕಚೇರಿಗಳು, ಅಧಿಕಾರಿಗಳ ಕೊಠಡಿಗಳನ್ನು ಶುಚಿಗೊಳಿಸಲಾಗಿದೆ. ಕಾರಿಡಾರ್‌ಗೆ ಬಣ್ಣ ಬಳಿದು, ಇಡೀ ಆವರಣ ಅಂದಗೊಳಿಸಲಾಗಿದೆ.

ಸಿದ್ಧತೆ ಪರಿಶೀಲಿಸಲು ಸುವರ್ಣ ಸೌಧಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್‌ ಮತ್ತು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಳಪೆ ಕಾಮಗಾರಿ ಮತ್ತು ಅವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು.

ಅವರ ನಿರ್ದೇಶನದ ಮೇರೆಗೆ ಸೌಧದಲ್ಲಿರುವ ಒಳಭಾಗದ ಗೋಡೆಗಳಿಗೆ ಬಣ್ಣ ಬಳಿಯಲಾಗಿದೆ. ಮಳೆಯಿಂದ ಪಾಚಿಗಟ್ಟಿದ ಹೊರಭಾಗದ ಗೋಡೆಗಳನ್ನು ನೀರಿನಿಂದ ತೊಳೆಯಲಾಗಿದೆ. ಸ್ವಚ್ಛ ಮಾಡಲಾಗಿದೆ.

ADVERTISEMENT

‘ಇದೇ ಮೊದಲ ಬಾರಿ ಎಲ್‌ಇಡಿ ಬಣ್ಣದ ದೀಪಗಳನ್ನು ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಸಂಜೆವೇಳೆ ಸುವರ್ಣ ಸೌಧವು ದೀಪಾಲಂಕಾರದಿಂದ ಕಂಗೊಳಿಸುತ್ತದೆ. ಅಧಿವೇಶನ ಮಾತ್ರವಲ್ಲ;ರಜಾ ದಿನಗಳು ಹಾಗೂ ರಾಷ್ಟ್ರೀಯ ಹಬ್ಬಗಳಂದು ದೀಪಗಳನ್ನು ಬೆಳಗಿಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್‌.ಎಸ್‌.ಸೊಬರದ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಿಧಾನಮಂಡಲ ಅಧಿವೇಶನದ ಸುಗಮ ನಿರ್ವಹಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ. ಸೌಧದ ಆವರಣದಲ್ಲಿನ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಕಚೇರಿಗಳನ್ನು ನೆಲಮಹಡಿಗೆ ಸ್ಥಳಾಂತರಿಸಲಾಗಿದೆ. ಸೌಧದ ಆವರಣದಲ್ಲಿ 800 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇದೆ. ಎಲ್ಲರ ಅನುಕೂಲಕ್ಕಾಗಿ 5,000 ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ಸ್ಥಳ ಒದಗಿಸಿದ್ದೇವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನಸಭೆ ಸಭಾಂಗಣದಲ್ಲಿರುವ ಪೀಠೋಪಕರಣಗಳನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿರುವುದು– ಪ್ರಜಾವಾಣಿ ಚಿತ್ರ:ಇಮಾಮ್‌ಹುಸೇನ್‌ ಗೂಡುನವರ
ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವಿದ್ಯುದ್ದೀಪಗಳ ಅಲಂಕಾರ ಮಾಡುವಲ್ಲಿ ಕಾರ್ಮಿಕರು ನಿರತವಾಗಿರುವುದು– ಪ್ರಜಾವಾಣಿ ಚಿತ್ರ
ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸಭಾಂಗಣದಲ್ಲಿ ಸೂಕ್ತ ವ್ಯವಸ್ಥೆ ಮಾಡುವುದರ ಜೊತೆಗೆ ಸೌಧದ ಆವರಣವನ್ನು ಸುಂದರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
–ನಿತೇಶ್‌ ಪಾಟೀಲ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.