ADVERTISEMENT

ಈಜು: ಆರ್ಯನ್ ಪಾಟೀಲ ರಾಷ್ಟ್ರಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 2:26 IST
Last Updated 7 ನವೆಂಬರ್ 2025, 2:26 IST
ಆರ್ಯನ್ ಪಾಟೀಲ
ಆರ್ಯನ್ ಪಾಟೀಲ   

ಖಾನಾಪುರ: ಸ್ಥಳೀಯ ಶಾಂತಿನಿಕೇತನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆರ್ಯನ್ ಪಾಟೀಲ ಈಚೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಗಳ ಸಹಯೋಗದಲ್ಲಿ  ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

200 ಮೀಟರ್ ಬಟರ್ ಫ್ಲೈ ಸ್ಟ್ರೋಕ್ ಮತ್ತು 400 ಮೀಟರ್ ಮಿಡಲ್ ರಿಲೇಯಲ್ಲಿ ಆರ್ಯನ್ ಚಿನ್ನದ ಪದಕ ಗಳಿಸಿದ್ದು, 400 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ ಪದಕ ಮತ್ತು 50 ಮೀಟರ್ ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.

 ಆರ್ಯನ್ ಅವರನ್ನು ಶಾಸಕ ಮತ್ತು ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ವಿಠ್ಠಲ ಹಲಗೇಕರ ಸೇರಿದಂತೆ ಕಾಲೇಜು ಗವರ್ನಿಂಗ್ ಸಮಿತಿಯ ಪದಾಧಿಕಾರಿಗಳು, ಪ್ರಾಚಾರ್ಯರು ಅಭಿನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.