ADVERTISEMENT

ಟ್ಯಾಂಕರ್ ಡಿಕ್ಕಿ; ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 7:46 IST
Last Updated 1 ಜೂನ್ 2025, 7:46 IST
   

ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಇಟಗಿ ಕ್ರಾಸ್ ರಸ್ತೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇವರೆಲ್ಲರೂ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದಲ್ಲಿ ರಾಮಚಂದ್ರ, ಮಹೇಶ, ರಾಮಣ್ಣ ಮೃತಪಟ್ಟಿದ್ದಾರೆ. ಭೀಮಾಬಾಯಿ, ಲಕ್ಷ್ಮೀಬಾಯಿ ಅನುಶ್ರೀ ಗಾಯಗೊಂಡಿದ್ದಾರೆ. ಇವರೆಲ್ಲರೂ ಕಲಬುರಗಿ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ವಾಹನ ಉರುಳಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅವರನ್ನು ಬೆಳಗಾವಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.