ಅಥಣಿ: ಪಟ್ಟಣದ ಸತ್ಯಪ್ರಮೋದ ನಗರ ನಿವಾಸಿ ಹಾಗೂ ಸತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣಕುಮಾರ ಕಡಪಟ್ಟಿಮಠ (41) ವಿದ್ಯುತ್ ತಗುಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಇವರು ಮೂಲತಃ ಜಮಖಂಡಿ ತಾಲ್ಲೂಕಿನ ತೇರದಾಳ ಗ್ರಾಮದವರಾಗಿದ್ದು, ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಗುರುವಾರ ತಮ್ಮ ಮನೆಯ ಗೇಟ್ ತೆಗೆಯಲು ಹೋದಾಗ ಈ ಘಟನೆ ಸಂಭವಿಸಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.