ADVERTISEMENT

ಮನೆಯಲ್ಲಿ ಕ್ಲಾಸ್: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 12:41 IST
Last Updated 13 ಮಾರ್ಚ್ 2021, 12:41 IST

ಅಥಣಿ (ಬೆಳಗಾವಿ): ‘ಕೋವಿಡ್–19 ಕಾರಣದಿಂದ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಪುನರಾರಂಭವಾಗಿಲ್ಲ. ಆದರೆ, ಅವರಿಗೆ ಮನೆಯಲ್ಲಿ ತರಗತಿ ನಡೆಸುತ್ತಿದ್ದ ತಾಲ್ಲೂಕಿನ ಕಕಮರಿ ಸರ್ಕಾರಿ ಶಾಲೆಯ ಶಿಕ್ಷಕ ಬಿ.ಜಿ. ಅವಟಿ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಬಿಇಒ ಎಂ.ಬಿ. ಮೋರಟಗಿ ತಿಳಿಸಿದ್ದಾರೆ.

‘ತರಗತಿ ನಡೆಸಲು ಸರ್ಕಾರ ಅನುಮತಿ ನೀಡಿಲ್ಲ. ಆದರೂ ಆ ಶಿಕ್ಷಕರು ಮನೆಯಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಹಣದಾಸೆಗೆ ತರಗತಿ ತೆಗೆದುಕೊಳ್ಳುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ತರಗತಿ ಮಾಡುತ್ತಿರುವುದು ಸಾಬೀತಾಗಿದೆ. ಹೀಗಾಗಿ, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು– 2021 ಪ್ರಕಾರ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT