ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ ವತಿಯಿಂದ ಶಿಕ್ಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುದುಚೆರಿಯ ಜವಾಹರಲಾಲ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ರಾಕೇಶ್ ಅಗರವಾಲ್ ಮಾತನಾಡಿ, ‘ಕೆಎಲ್‌ಇ ಸಂಸ್ಥೆ ಹಾಗೂ ವೈದ್ಯಕೀಯ ಕಾಲೇಜು ಆರೋಗ್ಯ– ವಿಜ್ಞಾನಗಳ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಅಪಾರ. ವೈದ್ಯಕೀಯ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವು ಕೇವಲ ಬೋಧನೆಗೆ ಸೀಮಿತವಾಗಿಲ್ಲ. ಬೋಧನೆಯ ಜತೆಗೆ ಅದರ ಪರಿಣಾಮಗಳೇನು ಎಂಬ ಬಗ್ಗೆಯೂ ತಿಳಿಸಿ ಕೊಡಬೇಕಾಗುತ್ತದೆ. ಹಾಗಾಗಿ ಉಳಿದೆಲ್ಲ ಗುರುಗಳಿಗಿಂತ ಆರೋಗ್ಯ ಕ್ಷೇತ್ರದ ಗುರುಗಳು ಹೆಚ್ಚು ಮನೋಸ್ಥೈರ್ಯ ಹೊಂದಿರುತ್ತಾರೆ’ ಎಂದರು.
ಜೆ.ಎನ್. ಮೆಡಿಕಲ್ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಪ್ರಾಧ್ಯಾಪಕ ಡಾ.ಎಂ.ಬಿ.ಬೆಲ್ಲದ, ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕ, ಉಪ ಕುಲಸಚಿವ ಡಾ.ಎಂ.ಎಸ್.ಗಣಾಚಾರಿ ಅವರಿಗೆ ‘ಶಿಕ್ಷಕರ ಶಿಕ್ಷಕರು’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಅತ್ಯುತ್ತಮ ವಿಜ್ಞಾನಿ, ಅತ್ಯುತ್ತಮ ಯುವ ವಿಜ್ಞಾನಿ ಪ್ರಶಸ್ತಿ ಪುರಸ್ಕೃತರು ಹಾಗೂ ಪಿಎಚ್.ಡಿ ಪದವೀಧರರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಕುಲಪತಿ ಡಾ. ವಿವೇಕ ಸಾವಜಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ ಮಾತನಾಡಿದರು. ಜೆಎನ್ಎಂಸಿ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ಪರೀಕ್ಷಾ ನಿಯಂತ್ರಣಾಧಿಕಾರಿಡಾ.ಜ್ಯೋತಿ ಎಂ.ನಾಗಮೋತಿ, ಡಾ.ಅವಿನಾಶ್ ಕವಿ, ಡಾ.ಸುನಿತಾ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.