ADVERTISEMENT

ಬೆಳಗಾವಿ: ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳನ್ನು ಹರಿದು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2023, 7:19 IST
Last Updated 30 ನವೆಂಬರ್ 2023, 7:19 IST
<div class="paragraphs"><p>ರಾಣಿ ಚನ್ನಮ್ಮನ ವೃತ್ತದಲ್ಲಿ&nbsp;ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳನ್ನು&nbsp;ಹರಿದು ಆಕ್ರೋಶ</p></div>

ರಾಣಿ ಚನ್ನಮ್ಮನ ವೃತ್ತದಲ್ಲಿ ಆಂಗ್ಲ ಭಾಷೆಯಲ್ಲಿದ್ದ ಜಾಹೀರಾತು ಫಲಕಗಳನ್ನು ಹರಿದು ಆಕ್ರೋಶ

   

ಬೆಳಗಾವಿ: ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಿರುವ ಜಾಹೀರಾತು ಫಲಕಗಳಲ್ಲಿ ಕನ್ನಡ ಕಡೆಗಣಿಸಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಟಿ‌.ಎ‌‌.ನಾರಾಯಣಗೌಡ ಬಣ) ಕಾರ್ಯಕರ್ತರು, ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಆಂಗ್ಲ ಭಾಷೆಯಲ್ಲಿದ್ದ ಹಲವು ಫಲಕಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಅವರನ್ನು ತಡೆಯಲು ಪೊಲೀಸರು ಯತ್ನಿಸಿದಾಗ, ಪರಸ್ಪರ ವಾಗ್ವಾದ ನಡೆಯಿತು‌.

ADVERTISEMENT

ಸದ್ಯ ಕಾರ್ಯಕರ್ತರು ವೃತ್ತದಲ್ಲೇ ಪ್ರತಿಭಟನೆ ಮುಂದುವರಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.