ADVERTISEMENT

ಅ‍ಪರಾಧಿಗಳಿಗೆ ರಾಜಾತಿಥ್ಯ: ಸಿದ್ದರಾಮಯ್ಯ, ಪರಮೇಶ್ವರ್‌ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 2:59 IST
Last Updated 13 ನವೆಂಬರ್ 2025, 2:59 IST
ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು
ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು   

ಬೆಳಗಾವಿ: ‘ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅತ್ಯಾಚಾರ, ದರೋಡೆ, ಇತರೆ ಅಪರಾಧಗಳು ಹೆಚ್ಚುತ್ತಿವೆ. ಸರ್ಕಾರ ಇವುಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ದೇಶವಿರೋಧಿ ಚಟುವಟಿಕೆಗಳನ್ನು ತಡೆಯಲು ಸರ್ಕಾರ ಕ್ರಮ ವಹಿಸುತ್ತಿಲ್ಲ. ಬದಲಿಗೆ ಪರಪ್ಪನ ಅಗ್ರಹಾರದಲ್ಲಿ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡುತ್ತಿದೆ’ ಎಂದು ದೂರಿದರು.

ADVERTISEMENT

‘ಭಯೋತ್ಪಾದಕರಿಗೆ ರಾಜಾತಿಥ್ಯ ನೀಡುತ್ತಿರುವ ಕಾರಾಗೃಹದ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಮಹಾಂತೇಶ ಚಿನ್ನಪ್ಪಗೌಡರ, ಮಹಾದೇವ ಧರೆನ್ನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.