ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಟಿಇಟಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 12:45 IST
Last Updated 7 ಡಿಸೆಂಬರ್ 2025, 12:45 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಬೆಳಗಾವಿ: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸುಗಮವಾಗಿ ನಡೆಯಿತು. ಇದಕ್ಕಾಗಿ 37 ಪರೀಕ್ಷಾ ಕೇಂದ್ರ ಗುರುತಿಸಲಾಗಿತ್ತು.

ಬೆಳಿಗ್ಗೆ ನಡೆದ ಮೊದಲ ಪರೀಕ್ಷೆಗೆ 4,022 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,784 ಅಭ್ಯರ್ಥಿಗಳು ಹಾಜರಾದರು. 238 ಅಭ್ಯರ್ಥಿಗಳು ಗೈರಾಗಿದ್ದರು.

ADVERTISEMENT

ಮಧ್ಯಾಹ್ನ ನಡೆದ ಎರಡನೇ ಪರೀಕ್ಷೆಗೆ 9,967 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 9,469 ಅಭ್ಯರ್ಥಿಗಳು ಹಾಜರಾದರೆ, 498 ಅಭ್ಯರ್ಥಿಗಳು ಗೈರು ಹಾಜರಾದರು.

‘ನಮ್ಮಲ್ಲಿ ಯಾವುದೇ ಗೊಂದಲವಿಲ್ಲದೆ ಪರೀಕ್ಷೆ ಸುಗಮವಾಗಿ ನಡೆದಿದೆ’ ಎಂದು ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.