ಬೆಳಗಾವಿ: ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್ ಮತ್ತು ಹದೀಸ್‌ನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ.
ನಿರ್ಮಾಣ ಹಂತದ ಮಸೀದಿ ಕೆಳ ಮಹಡಿಯಲ್ಲಿ ಕುರಾನ್ ಮತ್ತು ಎರಡು ಹದೀಸ್‌ಗಳಿದ್ದವು. ಬೆಳಿಗ್ಗೆ ಪ್ರಾರ್ಥನೆ ವೇಳೆ ಅವೆರಡೂ ಕಾಣದಿದ್ದಾಗ, ಸ್ಥಳೀಯರು ಹುಡುಕಾಡಿದರು. ಮಸೀದಿ ಪಕ್ಕದ ಜಮೀನಿನಲ್ಲಿ, ಅವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದವು. ಇದರಿಂದ ಗ್ರಾಮದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಪಟ್ಟು ಹಿಡಿದರು.
ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು. ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದರು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.