ಜುವೇರಿಯಾ ಜಾವೇದ್ ಮುಲ್ಲಾ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಭಾನುವಾರ ರಾತ್ರಿ ಗೃಹಿಣಿಯೊಬ್ಬರು ಸೀರೆಯಿಂದ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಕರೋಶಿ ನಿವಾಸಿ ಜುವೇರಿಯಾ ಜಾವೇದ್ ಮುಲ್ಲಾ (28) ಸಾವಿಗೀಡಾದವರು. ‘ಜುವೇರಿಯಾ ಹಾಗೂ ಪತಿ ಜಾವೇದ್ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಈ ಸಾವಿನಲ್ಲಿ ಅನುಮಾನ ಇದೆ’ ಎಂದು ಮೃತರ ತಾಯಿ ಮಹಾರಾಷ್ಟ್ರದ ಇಚಲಕರಂಜಿಯ ಅಫ್ಸಾನಾ ಕರೀಂ ಮುಲ್ಲಾ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚಿಕ್ಕೋಡಿ ಸಿಪಿಐ ನಾಗೇಶ ಕಾಡದೇವರಮಠ, ಪಿಎಸ್ಐ ಸಚಿನ ದಾಸರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಮರಣೋತ್ತರ ಪರೀಕ್ಷೆಯ ಬಳಿಕ ಶವ ಹಸ್ತಾಂತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.