ADVERTISEMENT

ಕಾಂಗ್ರೆಸ್‌ ಸರ್ಕಾರದ ಮುಖವಾಡ ಕಳಚಿಬಿದ್ದಿದೆ: ಸುಭಾಷ ಪಾಟೀಲ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 13:22 IST
Last Updated 22 ಜೂನ್ 2025, 13:22 IST
ಸುಭಾಷ ಪಾಟೀಲ
ಸುಭಾಷ ಪಾಟೀಲ   

ಬೆಳಗಾವಿ: ‘ಶಾಸಕ ಬಿ.ಆರ್‌.ಪಾಟೀಲ ಅವರ ಆಡಿಯೊ ವೈರಲ್‌ ಆಗುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮುಖವಾಡ ಕಳಚಿಬಿದ್ದಿದೆ’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ವ್ಯಂಗ್ಯವಾಡಿದ್ದಾರೆ.

ಭಾನುವಾರ ಪ್ರಕಟಣೆ ನೀಡಿದ ಅವರು, ‘ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆ ಜತೆಯಾಗಿ ಮುಂದಡಿ ಇಡುತ್ತಿವೆ. ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಸ್ವತಃ ಕಾಂಗ್ರೆಸ್ ಶಾಸಕರೇ ಬಹಿರಂಗಪಡಿಸಿದ್ದಾರೆ. ಬಡವರಿಗೆ ಮನೆ ಹಂಚಿಕೆ ಮಾಡಲು ಬಹಿರಂಗವಾಗಿಯೇ ಲಂಚ ಕೇಳಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT