ADVERTISEMENT

ಬೆಳಗಾವಿ| ಸಚಿವರ ಮಧ್ಯೆ ಇಲ್ಲ ಶೀತಲ ಸಮರ: ಚನ್ನರಾಜ ಹಟ್ಟಿಹೊಳಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2023, 7:52 IST
Last Updated 6 ಆಗಸ್ಟ್ 2023, 7:52 IST
ಚನ್ನರಾಜ ಹಟ್ಟಿಹೊಳಿ
ಚನ್ನರಾಜ ಹಟ್ಟಿಹೊಳಿ   

ಬೆಳಗಾವಿ: ‘ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಹಾಗೂ ಸತೀಶ ಜಾರಕಿಹೊಳಿ ಅವರ ನಡುವೆ ಶೀತಲ ಸಮರವಿಲ್ಲ. ಇದೊಂದು ಊಹಾಪೋಹ’ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ. ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಯಾವುದೇ ರೀತಿ ಯಾವುದೇ ಸಂದರ್ಭದಲ್ಲಿ ಅವರಿಬ್ಬರ ನಡುವೆ ವಿವಾದ ಬರುವುದಿಲ್ಲ. ಸಮನ್ವಯದಲ್ಲಿ ಎಲ್ಲ ಕೆಲಸ, ಕಾರ್ಯಗಳು ನಡೆದಿವೆ’ ಎಂದರು.

‘ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರವರ ಜಿಲ್ಲೆಯ ಉಸ್ತುವಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಲ್ಲದೇ  ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ ಸಚಿವ ಸತೀಶ ಜಾರಕಿಹೊಳಿ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವುದು ತೃಪ್ತಿ ಇದೆ. ಮುಂಬರುವ ದಿನಗಗಳಲ್ಲಿ ಜಿಲ್ಲೆಗೆ ಹೆಚ್ಚಿನ ಯೋಜನೆ ತರುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿ ಎತ್ತಿ ಹಿಡಿಯುವ ಪ್ರಯತ್ನ ಮಾಡಲಾಗುವುದು’ ಎಂದರು.

ADVERTISEMENT

‘ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಚೆ ಇದೆಯೇ’ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಎಲ್ಲರೂ ಕೆಲಸ ಮಾಡಬೇಕಿದೆ. ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುವುದು ಎಲ್ಲರ ಜವಾಬ್ದಾರಿ’ ಎಂದರು‌.

‘ಗೃಹಲಕ್ಷ್ಮಿ’ ಯೋಜನೆಯನ್ನು ಬೆಳಗಾವಿಯಿಂದಲೇ ಚಾಲನೆ ನೀಡಲು ನಿರ್ಧರಿಸಲಾಗಿದೆ. ತುರ್ತಾಗಿ ಉಪಾಯ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಚರ್ಚೆ ಮಾಡಿ ಇಲಾಖಾವಾರು ಹಾಗೂ ಶಾಸಕರ ಜೊತೆಗೆ ಸಭೆ ನಡೆಸಿ ಸಿಪಿಇಡಿ ಆವರಣದಲ್ಲಿ ಸುಮಾರು 2 ಲಕ್ಷ ಮಹಿಳೆಯರು ಸೇರುವ ಸಂಭವ ಇದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.