ಬೆಳಗಾವಿ: 'ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್) ಸೇರಿದಂತೆ ಯಾವುದೇ ಸಂಘ-ಸಂಸ್ಥೆ ಮತ್ತು ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾವ ಮತ್ತು ಚಿಂತನೆ ಸರ್ಕಾರದ ಮುಂದೆ ಇಲ್ಲ' ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
'ರಾಜ್ಯದಲ್ಲಿ ಆರ್ ಎಸ್ ಎಸ್ ನಿಷೇಧಿಸಲಾಗುತ್ತದೆಯೇ' ಎಂಬ ಸುದ್ದಿಗಾರರ ಪ್ರಶ್ನೆಗೆ, ಇಲ್ಲಿ ಶನಿವಾರ ಅವರು ಹೀಗೆ ಪ್ರತಿಕ್ರಿಯಿಸಿದರು.
'ಬೆಳಗಾವಿಯಲ್ಲಿ ಈ ಬಾರಿಯೂ ಬದ್ಧತೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸುತ್ತೇವೆ. ಅದಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲ' ಎಂದರು.
'ಬೆಳಗಾವಿಯಲ್ಲಿ ವಾಸಿಸುವ ಎಲ್ಲ ಭಾಷಿಕರೂ ನ.1ರಂದು ವೈಭವದಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನ ಆಚರಿಸುವವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.