ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ದೊಡವಾಡ ಗ್ರಾಮದಲ್ಲಿ ಪತಿ, ಪತ್ನಿ ಹಾಗೂ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಪತ್ನಿ ಶಾಂತವ್ವ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದವರು.
ಶನಿವಾರ ತಡರಾತ್ರಿ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ದೊಡ್ಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ಗ್ರಾಮ ಬೆಚ್ಚಿಬಿದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.