ADVERTISEMENT

‘ಟಿಕೆಟ್: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 12:03 IST
Last Updated 21 ನವೆಂಬರ್ 2020, 12:03 IST
ಲಕ್ಷ್ಮಿ ಹೆಬ್ಬಾಳಕರ
ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಯಾರೂ ಬಯಸಿರಲಿಲ್ಲ. ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿದೆ. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಿರುತ್ತೇನೆ’ ಎಂದು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಂಗಡಿ ಅವರಿಗೆ ಸಾಯುವಂತಹ ವಯಸ್ಸಾಗಿರಲಿಲ್ಲ. ನನ್ನ ಕ್ಷೇತ್ರಕ್ಕೆ ಸಾಕಷ್ಟು ಅನುದಾನವನ್ನು ಅವರು ಕೊಟ್ಟಿದ್ದರು. ಅಭಿವೃದ್ಧಿ ವಿಚಾರದಲ್ಲಿ ಪಕ್ಷಪಾತ ಮಾಡಿರಲಿಲ್ಲ. ಹೀಗಾಗಿ ಸಾಧಕ-ಬಾಧಕಗಳನ್ನು ವಿಚಾರ ಮಾಡಿ ಪಕ್ಷ ಅಂತಿಮ ತೀರ್ಮಾನ ಮಾಡುತ್ತದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ ಪ್ರಬಲ ಅಭ್ಯರ್ಥಿ ಅಲ್ಲ’ ಎಂಬ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರ ಹೇಳಿಕೆಗೆ ಉತ್ತರಿಸುವ ಸಂದರ್ಭ ಇದಲ್ಲ. 2023ಕ್ಕೆ ಉತ್ತರ ನೀಡುತ್ತೇನೆ’ ಎಂದು ತಿರುಗೇಟು ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.