ADVERTISEMENT

ಆನೆ ದಂತದ ಕಡಗ, ಹುಲಿ ಉಗುರು ಮಾರಾಟ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 11:33 IST
Last Updated 15 ಡಿಸೆಂಬರ್ 2020, 11:33 IST
ವಶಪಡಿಸಿಕೊಂಡ ಆನೆ ದಂತದ ಕಡಗ ಹಾಗೂ ಹುಲಿ ಉಗುರುಗಳು
ವಶಪಡಿಸಿಕೊಂಡ ಆನೆ ದಂತದ ಕಡಗ ಹಾಗೂ ಹುಲಿ ಉಗುರುಗಳು   

ಬೆಳಗಾವಿ: ಹುಲಿ ಉಗುರುಗಳು ಮತ್ತುಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದದವರು ಬಂಧಿಸಿದ್ದಾರೆ.

ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ADVERTISEMENT

ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಲ್ಲಿ ದೂರು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಂದಿನ ತನಿಖೆಯನ್ನು ಬೆಳಗಾವಿ ಎಸಿಎಫ್‌ಗೆ ವಹಿಸಲಾಗಿದೆ ಎಂದು ದಳದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.