ADVERTISEMENT

ಎಪಿಎಂಸಿ: ತರಕಾರಿ ಮಾರಾಟ-ಖರೀದಿಗೆ ಸಮಯ ನಿಗದಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 13:42 IST
Last Updated 27 ಮಾರ್ಚ್ 2020, 13:42 IST
ಮನೆ ಮನೆಗೆ ತರಕಾರಿ ತಲುಪಿಸಲು ತೋಟಗಾರಿಕೆ ಇಲಾಖೆ ಸಿದ್ಧಪಡಿಸಿರುವ ವಾಹನಗಳು
ಮನೆ ಮನೆಗೆ ತರಕಾರಿ ತಲುಪಿಸಲು ತೋಟಗಾರಿಕೆ ಇಲಾಖೆ ಸಿದ್ಧಪಡಿಸಿರುವ ವಾಹನಗಳು   

ಬೆಳಗಾವಿ: ‘ಇಲ್ಲಿನ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಹೆಚ್ಚು ಜನಸಂದಣಿ ಸೇರುತ್ತಿರುವುದರಿಂದ ರೈತ ಬಾಂಧವರು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೇಡಿಕೆ ಇರುವಷ್ಟು ಮಾತ್ರ ತರಕಾರಿಗಳನ್ನು ವ್ಯಾಪಾರಕ್ಕಾಗಿ ತರಬೇಕು’ ಎಂದು ಎಪಿಎಂಸಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

‘ಕೋವಿಡ್ -19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸಲು ಈ ಕ್ರಮಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

‘ಅದೇ ರೀತಿ ನಗರದಲ್ಲಿ ಮಾರಾಟಕ್ಕಾಗಿ ಖರೀದಿ ಮಾಡುವ ಚಿಲ್ಲರೆ ವರ್ತಕರು ಮತ್ತು ಸಗಟು ಖರೀದಿದಾರರು ಬೆಳಿಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಸರದಿ ಸಾಲಿನಲ್ಲಿ ಖರೀದಿಸಬೇಕು’ ಎಂದು ಕೋರಿದ್ದಾರೆ.

ADVERTISEMENT

‘ಒಂದೇ ಕಡೆ ಗುಂಪಿನಲ್ಲಿ ಸೇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವುದು ಕಠಿಣವಾಗುತ್ತದೆ. ಅದೂ ಅಲ್ಲದೇ ಬೆಳಗಾವಿ ನಗರದ ನಾಗರಿಕರು ತರಕಾರಿ ಖರೀದಿಸಲು ನೇರವಾಗಿ ಎಪಿಎಂಸಿಗೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ’ ಎಂದರು.

‘ತೋಟಗಾರಿಕೆ ಇಲಾಖೆಯಿಂದ ನಗರದ ಎಲ್ಲಾ ವಾರ್ಡಗಳಲ್ಲಿ ಪ್ರತಿದಿನ ತರಕಾರಿಯನ್ನು ಮಾರಾಟ
ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಆತಂಕಪಡುವ ಅವಶ್ಯಕತೆ ಇರುವುದಿಲ್ಲ. ಜನರು ಸಹಕರಿಸಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.