ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಜಾಂಬೋಟಿಯಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಶನಿವಾರದಿಂದ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಾಂಬೋಟಿಯಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಜಾಂಬೋಟಿ– ಪೀರಣವಾಡಿ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ– 54) ಕುಸಮಳಿ ಗ್ರಾಮದ ಹತ್ತಿರದ ಸೇತುವೆ ಹಳೆಯದಾಗಿದೆ. ಇದು ಸಂಚಾರಕ್ಕೆ ಯೋಗ್ಯವಾಗಿಲ್ಲ. ಅಲ್ಲದೇ ಜಾಂಬೋಟಿಯಿಂದ ಖಾನಾಪುರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ ಭಾರಿ ವಾಹನಗಳ ಸಂಚಾರಕ್ಕೆ ಸೂಕ್ತವಿಲ್ಲ. ಎರಡೂ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರವನ್ನು ಮುಂದಿನ ಆದೇಶದ ವರೆಗೆ ನಿರ್ಭಂದಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.