ADVERTISEMENT

ಪಂಚಮಸಾಲಿ ಹೋರಾಟ | ಟ್ರ್ಯಾಕ್ಟರ್ ತರಲು ಯತ್ನ: ಪ್ರತಿಭಟನಾಕಾರರು ಪೊಲೀಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2024, 6:59 IST
Last Updated 10 ಡಿಸೆಂಬರ್ 2024, 6:59 IST
   

ಬೆಳಗಾವಿ: ನಿಷೇಧದ ಮಧ್ಯೆಯೂ ಪಂಚಮಸಾಲಿ ಹೋರಾಟಕ್ಕೆ ಟ್ರ್ಯಾಕ್ಟರ್ ತರಲು ಯತ್ನಿಸಿದ ಹೋರಾಟಗಾರರನ್ನು ಹಿರೇಬಾಗೇವಾಡಿ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದರು.

5 ಸಾವಿರ ಟ್ರ್ಯಾಕ್ಟರ್‌ಗಳ ಮೆರವಣಿಗೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೋರಟಗಾರರು ಯೋಜಿಸಿದ್ದರು‌. ಇದಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT