ಸಂಕೇಶ್ವರ: ಮಂಗಳೂರಿನಿಂದ ಅಥಣಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮದಿಂದ 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕೇಶ್ವರ ಸಮೀಪದ ಚಿಕ್ಕಾಲಗುಡ ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.