ADVERTISEMENT

ಬೆಳಗಾವಿ: ಕೋವಿಡ್‌ನಿಂದ ಮತ್ತಿಬ್ಬರು ಸಾವು, ಮತ್ತೆ 27 ಮಂದಿಗೆ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 17:31 IST
Last Updated 13 ಜುಲೈ 2020, 17:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಕೋವಿಡ್–19ನಿಂದ ಬಳಲುತ್ತಿದ್ದ ಇಬ್ಬರು ಸೋಮವಾರ ಮುಂಜಾನೆ ಮೃತರಾಗಿದ್ದಾರೆ. ಇದರೊಂದಿಗೆ ಈ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಗೋಕಾಕ ತಾಲ್ಲೂಕು ಕೌಜಲಗಿಯ 45 ವರ್ಷದ ವ್ಯಕ್ತಿ (ಭಾನುವಾರ ಅವರಿಗೆ ಸೋಂಕು ದೃಢಪಟ್ಟಿತ್ತು) ಹಾಗೂ ಅಥಣಿಯ 72 ವರ್ಷದ ವ್ಯಕ್ತಿ ಸಾವಿಗೀಡಾದವರು. ಇಬ್ಬರಿಗೂ ತೀವ್ರ ಉಸಿರಾಟದ ತೊಂದರೆ ಇತ್ತು. 9 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸೋಮವಾರ ಒಂದೇ ದಿನಹೊಸದಾಗಿ 27 ಮಂದಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಬಹಳಷ್ಟು ಮಂದಿ ಶೀತ ಜ್ವರ (ಐಎಲ್‌ಐ)ದಿಂದ ಬಳಲುತ್ತಿರುವವರಾಗಿದ್ದಾರೆ. ಎಲ್ಲರನ್ನೂ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಕೌಜಲಗಿ ವರದಿ

ಕೌಜಲಗಿ ಸಮೀಪದ ಯಾದವಾಡ ಗ್ರಾಮದಲ್ಲಿ 33 ವರ್ಷದ ವ್ಯಕ್ತಿಗೆ ಕೋವಿಡ್–19 ದೃಢಪಟ್ಟಿದೆ. ಅವರು ಹೋಟೆಲ್‌ ನಡೆಸುತ್ತಿದ್ದರು. ಆನಾರೋಗ್ಯದಿಂದ ಬಾಗಲಕೋಟೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂದು ತಿಳಿದುಬಂದಿದೆ.

ಸೋಂಕಿತರ ಮನೆಯ ಸುತ್ತಮುತ್ತಲಿನ 50 ಮೀಟರ್ ಪ್ರದೇಶದಲ್ಲಿ ಸೀಲ್‌ಡೌನ್‌ ಮಾಡಲಾಗಿದೆ. ಅವರ ಕುಟುಂಬದ ಐವರನ್ನು ಕ್ವಾರೆಂಟೈನ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.