ADVERTISEMENT

ಬೈಲಹೊಂಗಲ: ಕಾರು- ಬೈಕ್ ಡಿಕ್ಕಿ, ಇಬ್ಬರು ಸವಾರರ ಸಾವು

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 6:16 IST
Last Updated 20 ಜುಲೈ 2022, 6:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೈಲಹೊಂಗಲ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಜಾಲಿಕೊಪ್ಪದಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕಾರು- ಬೈಕ್ ಮಧ್ಯೆ ಮಂಗಳವಾರ ರಾತ್ರಿ
ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಮಲ್ಲೂರ(11), ಶಿವಪ್ಪ ಮಲ್ಲೂರು(46) ಮೃತರು.

ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿದ್ದ ಕಾರು, ಬೆಳವಡಿಯಿಂದ ಬೈಲಹೊಂಗಲಕ್ಕೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಸವಾರ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.