ADVERTISEMENT

ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ: ಇಬ್ಬರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 12:56 IST
Last Updated 6 ಫೆಬ್ರುವರಿ 2021, 12:56 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಬೆಳಗಾವಿ: ನಗರದ ಟಿಳಕವಾಡಿ ಕಾಂಗ್ರೆಸ್‌ ರಸ್ತೆಯ ಅಪಾರ್ಪ್‌ಮೆಂಟ್‌ ಒಂದರಲ್ಲಿ ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಶನಿವಾರ ಬಂಧಿಸಿರುವ ಸಿಇಎನ್ (ಸೈಬರ್, ಎಕನಾಮಿಕ್ಸ್‌ ಆ್ಯಂಡ್ ನಾರ್ಕೋಟಿಕ್) ಠಾಣೆ ಪೊಲೀಸರು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಟಿಳಕವಾಡಿ ಮರಾಠಾ ಕಾಲೊನಿಯ ಪ್ರಕಾಶ ಕನ್ನಪ್ಪ ಯಳ್ಳೂರಕರ (27) ಹಾಗೂ ಹಳೆ ಬೆಳಗಾವಿಯ ಮರಗಾಯಿ ಗಲ್ಲಿಯ ವಿನಾಯಕ ಕೇದಾರಿ ಶಿಂಧೆ (37) ಬಂಧಿತರು. ಸ್ಥಳದಲ್ಲಿದ್ದ, ಅನೈತಿಕ ಚಟುವಟಿಕೆಗೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇನ್‌ಸ್ಪೆಕ್ಟರ್‌ ಬಿ.ಆರ್. ಗಡ್ಡೇಕರ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಪ್ರಕರಣ ದಾಖಲಾಗಿದೆ. ತಂಡಕ್ಕೆ ನಗರ ಪೊಲೀಸ್ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.

ADVERTISEMENT

‘ನಗರದಲ್ಲಿ ಸ್ಪಾ ನಡೆಸುವವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಸಿಬ್ಬಂದಿಯ ದಾಖಲೆಗಳನ್ನು ನಿರ್ವಹಿಸಬೇಕು. ಅನೈತಿಕ ಚಟುವಟಿಕೆಗಳನ್ನು ನಡೆಸಬಾರದು. ಇದನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಡಿಸಿಪಿ ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.