ADVERTISEMENT

ಇಬ್ಬರು ‘ನಕಲಿ ಅಭ್ಯರ್ಥಿಗಳು’ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 13:58 IST
Last Updated 18 ಅಕ್ಟೋಬರ್ 2020, 13:58 IST

ಬೆಳಗಾವಿ: ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಇಲ್ಲಿ ಭಾನುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ, ಇಬ್ಬರು ನಕಲಿ ಅಭ್ಯರ್ಥಿಗಳನ್ನು ಪೊಲೀಸರು ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಜೈನ್‌ ಕಾಲೇಜು ಹಾಗೂ ವಸಂತರಾವ್‌ ಪೋತದಾರ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿಸಿದ್ದ ಇಬ್ಬರ ಬದಲಿಗೆ ಬೇರೆಯವರು ಪರೀಕ್ಷೆಗೆ ಹಾಜರಾಗಲು ಬಂದಿದ್ದರು. ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸುವ ವೇಳೆ ಅವರು ಸಿಕ್ಕಿಬಿದ್ದಿದ್ದಾರೆ. ಅವರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಉಳಿದಂತೆ ಪರೀಕ್ಷೆ ಸುಗಮವಾಗಿ ನಡೆದಿದೆ. ನೋಂದಾಯಿಸಿಕೊಂಡಿದ್ದ 6,909 ಅಭ್ಯರ್ಥಿಗಳ ಪೈಕಿ 5,760 ಮಂದಿ ಹಾಜರಾಗಿದ್ದರು’ ಎಂದು ನಗರ ‍ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.