ADVERTISEMENT

ಬೆಳಗಾವಿ: ಶಾಲೆಗಳಿಗೆ ಮತ್ತೆರಡು ದಿನ ರಜೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 16:11 IST
Last Updated 24 ಜುಲೈ 2024, 16:11 IST

ಬೆಳಗಾವಿ: ಜಿಲ್ಲೆಯಲ್ಲಿ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಕೆಲವು ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 25 ಹಾಗೂ 26ರಂದು ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ ನಗರ, ಬೆಳಗಾವಿ ತಾಲ್ಲೂಕು, ಖಾನಾಪುರ, ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಅನ್ವಯಿಸಲಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

ಜುಲೈ 21ರಿಂದಲೇ ಈ ಶಾಲೆಗಳು ಬಾಗಿಲು ಹಾಕಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.