ADVERTISEMENT

ಗುತ್ತಿಗೆದಾರ ಸಂತೋಷ್ ಮನೆಗೆ ಉಡುಪಿ ಪೊಲೀಸರ ಭೇಟಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 12:49 IST
Last Updated 16 ಏಪ್ರಿಲ್ 2022, 12:49 IST
ಗುತ್ತಿಗೆದಾರ ಸಂತೋಷ್‌ ಪಾಟೀಲ
ಗುತ್ತಿಗೆದಾರ ಸಂತೋಷ್‌ ಪಾಟೀಲ   

ಬೆಳಗಾವಿ: ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಉಡುಪಿ ಪೊಲೀಸರು, ಇಲ್ಲಿನ ವಿಜಯನಗರದ ಸಮರ್ಥ ಕಾಲೊನಿಯಲ್ಲಿರುವ ಮತ್ತು ತಾಲ್ಲೂಕಿನ ಬಡಸ ಕೆ.ಎಚ್. ಗ್ರಾಮದಲ್ಲಿರುವ ಅವರ ಮನೆಗೆ ಶನಿವಾರ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದರು.

ಸಂತೋಷ್ ಅವರ ಸಹೋದರ ಸಂಬಂಧಿ ಪ್ರಶಾಂತ್ ಪಾಟೀಲ ಅವರಿಂದಲೂ ಮಾಹಿತಿ ಪಡೆದರು. ಹಿಂಡಲಗಾ ವ್ಯಾಪ್ತಿಯಲ್ಲಿ ಸಂತೋಷ್ ನಡೆಸಿದ್ದಾರೆ ಎನ್ನಲಾದ ಕಾಮಗಾರಿಗಳ ಸ್ಥಳ ಪರಿಶೀಲಿಸಿ, ವಿವರ ಸಂಗ್ರಹಿಸಿದರು ಎಂದು ತಿಳಿದುಬಂದಿದೆ. ಉಡುಪಿ ಪೊಲೀಸ್ ಠಾಣೆಯ ಸಿಪಿಐ ಶರಣಗೌಡ ಮತ್ತು ನಾಲ್ವರು ಸಿಬ್ಬಂದಿ, ಹಿರೇಬಾಗೇವಾಡಿ ಪೊಲೀಸ್‌ ಠಾಣೆಯ ಇಬ್ಬರು ಸಿಬ್ಬಂದಿ ತಂಡದಲ್ಲಿದ್ದರು.‌

‘ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾರ್ಯಾದೇಶಪತ್ರ ನೀಡಲು ಹಾಗೂ ಬಿಲ್‌ ಬಿಡುಗಡೆಗೆ ಶೇ 40ರಷ್ಟು ಕಮಿಷನ್ ಕೇಳುತ್ತಿದ್ದಾರೆ’ ಎಂದು ಆರೋಪಿಸಿದ್ದ ಸಂತೋಷ್ ಉಡುಪಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.