ADVERTISEMENT

ಉಗರಗೋಳ | ಕಾಣಿಕೆ ನೋಟುಗಳನ್ನು ಒಣಹಾಕಿದ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 7:43 IST
Last Updated 13 ಆಗಸ್ಟ್ 2025, 7:43 IST
ಸವದತ್ತಿ ತಾಲ್ಲೂಕಿನ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಒದ್ದೆಯಾದ ಹಣವನ್ನು ಮಂಗಳವಾರ ಒಣಗಿಸಲಾಯಿತು.
ಸವದತ್ತಿ ತಾಲ್ಲೂಕಿನ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಒದ್ದೆಯಾದ ಹಣವನ್ನು ಮಂಗಳವಾರ ಒಣಗಿಸಲಾಯಿತು.   

ಉಗರಗೋಳ (ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ದೇವಸ್ಥಾನದ ಆವರಣಕ್ಕೆ ಈಚೆಗೆ ಮಳೆ ನೀರು ನುಗ್ಗಿದ್ದರಿಂದ ಹುಂಡಿಯಲ್ಲಿದ್ದ ಕಾಣಿಕೆ ಹಣ ಒದ್ದೆಯಾಯಿತು. ಮಂಗಳವಾರ ನೋಟುಗಳನ್ನು ದೇವಸ್ಥಾನದ ಪ್ರಾಂಗಣದಲ್ಲಿ ಹಾಕಲಾಯಿತು.

ಧಾರ್ಮಿಕ ದತ್ತಿ ಇಲಾಖೆ, ಬೈಲಹೊಂಗಲ ಉಪವಿಭಾಗಾಧಿಕಾರಿ ಕಚೇರಿ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿ ಒಡೆದು, ಹಣ ಒಣಗಿಸಲಾಯಿತು. ಈ ನೋಟುಗಳೆಲ್ಲವೂ ಕುಂಕುಮ– ಭಂಡಾರಮಯವಾಗಿವೆ.

ಸವದತ್ತಿ ತಾಲ್ಲೂಕಿನ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಒದ್ದೆಯಾದ ಹಣವನ್ನು ಮಂಗಳವಾರ ಒಣಗಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT