ADVERTISEMENT

ವ್ಯಕ್ತಿತ್ವ ರೂಪಿಸಲು ಶಿಕ್ಷಣ ಬುನಾದಿ: ಕತ್ತಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 13:37 IST
Last Updated 5 ಸೆಪ್ಟೆಂಬರ್ 2020, 13:37 IST
ಹುಕ್ಕೇರಿಯಲ್ಲಿ ಶನಿವಾರ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನ ಸನ್ಮಾನಿಸಲಾಯಿತು
ಹುಕ್ಕೇರಿಯಲ್ಲಿ ಶನಿವಾರ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನ ಸನ್ಮಾನಿಸಲಾಯಿತು   

ಹುಕ್ಕೇರಿ: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆಯ ಅಂಶಗಳಿದ್ದು, ಅವನ್ನು ಕರಗತ ಮಾಡಿಕೊಂಡು ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ರೂಪಿಸಲು ಶಿಕ್ಷಕರು ಸನ್ನದ್ಧರಾಗಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಪವನ್ ಕತ್ತಿ ಹೇಳಿದರು.

ಸ್ಥಳೀಯ ವಿಶ್ವರಾಜ ಭವನದಲ್ಲಿ ಶನಿವಾರ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ತಹಶೀಲ್ದಾರ್ ಅಶೋಕ ಗುರಾಣಿ, ತಾಲ್ಲೂಕು ಪಂಚಾಯ್ತಿ ಇಒ ಬಿ.ಕೆ.ಲಾಳಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ದಸ್ತಗೀರ್ ಬಸ್ಸಾಪುರೆ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಸದಸ್ಯ ರಾಜು ಮುನ್ನೋಳಿ, ಜಿಲ್ಲಾ ಪಂಚಾಯ್ತಿ ಸದಸ್ಯ ನಿಂಗನಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಬಾಳಪ್ಪ ಅಕ್ಕತಂಗೇರಹಾಳ, ನಿಂಗಪ್ಪ ಪೂಜೇರಿ, ಬಾಳಪ್ಪ ಘಸ್ತಿ, ಇಂದುಮತಿ ಮಾಳಗೆ, ನಿಂಬೆವ್ವ ಮಾದರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶ್ರೀಶೈಲ್ ಹಿರೇಮಠ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹಾಂತೇಶ ನಾಯಿಕ, ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಲ್.ಪೂಜಾರಿ, ಜಿಲ್ಲಾ ಸಂಘದ ಬಾಯನ್ನವರ, ಎನ್.ಬಿ.ಗುಡಸಿ ಇದ್ದರು.

ADVERTISEMENT

ತಮ್ಮಣ್ಣ ಹಡಪದ ಮತ್ತು ನಿರಂಜನ ಬಡಿಗೇರ ತಂಡವು ನಾಡಗೀತೆ ಹಾಗು ರೈತ ಗೀತೆ ಹಾಡಿದರು. ಬಿಇಒ ಮೋಹನ್ ದಂಡೀನ್ ಸ್ವಾಗತಿಸಿದರು. ಶಿವಾನಂದ ಪಾಟೀಲ್ ಮತ್ತು ಮಹಾಂತೇಶ ಪೂಜೇರಿ ನಿರೂಪಿಸಿದರು. ಮಹಾಂತೇಶ ಹಿರೇಮಠ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.