ಮೂಡಲಗಿ: ‘ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವುದು ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ನಾಂದಿ ಹಾಡುವ ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಕೇಂದ್ರ ಬಜೆಟ್ ಪೂರಕವಾಗಿದೆ’ ಎಂದು ರಾಜ್ಯಸಭಾ ಈರಣ್ಣ ಕಡಾಡಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು 2025-26 ನೇ ಸಾಲಿನ ಬಜೆಟ್‌ನಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.