ADVERTISEMENT

ಅಂಗಡಿ ಪಾರ್ಥಿವ ಶರೀರ ಬೆಳಗಾವಿಗೆ ತರಲು ಕೋವಿಡ್ ಅಡ್ಡಿ: ದೆಹಲಿಯಲ್ಲೇ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 4:19 IST
Last Updated 24 ಸೆಪ್ಟೆಂಬರ್ 2020, 4:19 IST
ಸುರೇಶ ಅಂಗಡಿ (ಸಂಗ್ರಹ ಚಿತ್ರ)
ಸುರೇಶ ಅಂಗಡಿ (ಸಂಗ್ರಹ ಚಿತ್ರ)   

ಬೆಳಗಾವಿ: ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದಸಂಸದ, ರೈಲ್ವೆ ಖಾತೆರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ.

ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಬೇಕು. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬದವರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಅಂಗಡಿ ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರಯತ್ನ ಆರಂಭಿಸಿದ್ದರು.

ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ.
ದೆಹಲಿಯ ದ್ವಾರಕಾ ಸೆಕ್ಟರ್ 24ರಲ್ಲಿ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.