ADVERTISEMENT

‘ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧ’: ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 2:28 IST
Last Updated 25 ಜುಲೈ 2025, 2:28 IST
ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ  ಜರುಗಿದ ಮಹರ್ಷಿ ಭಗೀರಥ ಮಹಾರಾಜರ ಪ್ರವಚನದ ಸಮಾರೋಪದಲ್ಲಿ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶಾಸಕ ಬಾಲಚಂದ್ರ ಜಾರಕಿಹೊಳಿ,  ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಪಾಲ್ಗೊಂಡಿದ್ದರು
ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ  ಜರುಗಿದ ಮಹರ್ಷಿ ಭಗೀರಥ ಮಹಾರಾಜರ ಪ್ರವಚನದ ಸಮಾರೋಪದಲ್ಲಿ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶಾಸಕ ಬಾಲಚಂದ್ರ ಜಾರಕಿಹೊಳಿ,  ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಪಾಲ್ಗೊಂಡಿದ್ದರು   

ಮೂಡಲಗಿ: ‘ಹಿಂದುಳಿದ ಭಗೀರಥ ಉಪ್ಪಾರ ಸಮಾಜದ ಅಭಿವೃದ್ಧಿಗೆ ಸದಾ ಬದ್ಧನಿದ್ದು, ಬೆಳಗಾವಿ ಹಾಲು ಉತ್ಪಾದಕರ  ಸಂಘಕ್ಕೆ ನೇಮಕ ಮಾಡಬೇಕಾಗಿರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಮೂಡಲಗಿ, ಗೋಕಾಕ ತಾಲ್ಲೂಕಿನ ಭಗೀರಥ ಉಪ್ಪಾರ ಸಮಾಜಕ್ಕೆ ಸೇರಿರುವ ಮತ್ತು ರೈತಪರ ಕಾಳಜಿಯುಳ್ಳ ವ್ಯಕ್ತಿಯನ್ನು ನೇಮಕ ಮಾಡಲಾಗುವುದು’ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು.

ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್‌ ಟ್ರಸ್ಟ್‌ ಮತ್ತು ಕಪರಟ್ಟಿ–ಕಳ್ಳಿಗುದ್ದಿ ಮಠದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆಷಾಢ ಮಾಸದ ಪ್ರಯುಕ್ತ ಮಹರ್ಷಿ ಭಗೀರಥರ ಹಳ್ಳಿಹಳ್ಳಿಗೆ ಒಂದು ತಿಂಗಳವರೆಗೆ ಪೂಜೆ ಮತ್ತು ಪ್ರವಚನದ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಕ್ಟೋಬರ್ ತಿಂಗಳಲ್ಲಿ ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ವಿವಿಧ ಸಮಾಜಗಳ ಮುಖಂಡರ ಸಭೆಯನ್ನು ಕರೆಯಲಾಗುವುದು. ಮೂಡಲಗಿ- ಗೋಕಾಕ ತಾಲ್ಲೂಕಿನ ಎರಡೂ ಸ್ಥಾನಗಳಿಗೆ ಒಮ್ಮತದ ಅಭ್ಯರ್ಥಿಯನ್ನು ಹಾಕಲಾಗುವುದು. ರೈತರ ಕಷ್ಟಕ್ಕೆ ಸ್ಪಂದಿಸುವ ಜನಪರ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

ADVERTISEMENT

ಮಸಗುಪ್ಪಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತ ಸಂಭ್ರಮವನ್ನು ಆಚರಿಸುತ್ತಿದ್ದು, ಇದನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಪ್ರತಿ ಆಷಾಢ ಮಾಸದ ಪ್ರಯುಕ್ತ ಕಪರಟ್ಟಿ- ಕಳ್ಳಿಗುದ್ದಿ ಬಸವರಾಜ ಸ್ವಾಮಿಗಳ ನೇತೃತ್ವದಲ್ಲಿ ಮಹಾನ್ ಪುರುಷರನ್ನು ಸ್ಮರಿಸುವ ಕಾರ್ಯಕ್ರಮಗಳನ್ನು ಹಳ್ಳಿಹಳ್ಳಿಗಳಲ್ಲಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿದರು. ಕಪರಟ್ಟಿ- ಕಳ್ಳಿಗುದ್ದಿ ಮಠದ ಬಸವರಾಜ ಸ್ವಾಮಿಗಳು ಪ್ರಾಸ್ತಾವಿಕ ಮಾತನಾಡಿದರು. ಖಡಕಭಾವಿಯ ಧರೇಶ್ವರ ಸ್ವಾಮಿಗಳು. ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಮೂಡಲಗಿ ಮತ್ತು ಗೋಕಾಕ ತಾಲ್ಲೂಕಿನ ಭಗೀರಥ ಉಪ್ಪಾರ ಸಮಾಜ ಬಾಂಧವರು ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.