ಬೈಲಹೊಂಗಲ: ಕಿತ್ತೂರ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಬೆಳಗಾವಿಯ ಗೌರಂಗ್ ಗೆಂಜೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ಕುರಿತು ಶಿರಸ್ತೇದಾರ್ ಎಸ್.ಅರ್. ಗೌಡರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಬಗ್ಗೆ ಅವಹೇಳನ ಸಲ್ಲ. ಇಂತಹ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.
ಕನ್ನಡ ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಅರ್ಭಾಜ ಮುಲ್ಲಾ, ಸಲೀಂ ಜಾಮಿನದಾರ, ಶಕೀಬ ಬಹದ್ದೂರ ಶಾಯಿ, ಈರಣ್ಣ ಇಂಚಲ, ಸೊಹೈಲ ಪಾಟೀಲ, ಜುನೇದ ಕಡಬಿ, ಸಲ್ಮಾನ ಮನಿಯಾರ, ಉಮ್ಮರ ಹುಬ್ಬಳ್ಳಿ, ಪ್ರದೀಪ ತಟ್ಟಿಮನಿ, ಪ್ರಜ್ವಲ ಹೂಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.