ಬೆಳಗಾವಿ: ಇಲ್ಲಿನ ಕೆಎಲ್ಇ ಔಷಧ ವಿಜ್ಞಾನ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದಿಂದ ಈಚೆಗೆ ವನ ಮಹೋತ್ಸವ ಆಚರಿಸಲಾಯಿತು.
ಕಾಲೇಜಿನ ಆವರಣದಲ್ಲಿರುವ ‘ಸಂಜೀವಿನಿ’ ಔಷಧೀಯ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ನಾಂದಿ ಹಾಡಲಾಯಿತು.
ಪ್ರಾಚಾರ್ಯ ಡಾ. ಸುನೀಲ್ ಜಲಾಲಪುರೆ, ‘ಪ್ರತಿ ಬೋಧಕ ಸಿಬ್ಬಂದಿ ಒಂದೊಂದು ಸಸಿಗಳನ್ನು ದತ್ತು ಪಡೆದು ಅವುಗಳ ಪೋಷಣೆ ಹೊಣೆ ಹೊರಬೇಕು’ ಎಂದು ಸೂಚಿಸಿದರು.
ಕೆಎಲ್‌ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಎನ್‌ಎಸ್‌ಎಸ್ ಸಂಯೋಜಕಿ ಡಾ.ಅಶ್ವಿನಿ ನರಸನ್ನವರ, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಸಂಜಯ ಉಗಾರೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.