ADVERTISEMENT

ಪ್ರೋತ್ಸಾಹಧನ: ಅಂಗನವಾಡಿ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 14:15 IST
Last Updated 3 ಜುಲೈ 2020, 14:15 IST
ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಕೊರೊನಾ ಸೋಂಕಿನ ಜಾಗೃತಿ ಕಾರ್ಯದಲ್ಲಿ ತೊಡಗಿರುವ ತಮಗೂ ₹ 5ಸಾವಿರ ಪ್ರೋತ್ಸಾಹಧನ ನೀಡಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಗ್ರಾಮೀಣ ನೌಕರರಿಗೆ ಈ ತಿಂಗಳ ಗೌರವಧನವನ್ನು ಕೂಡಲೇ ನೀಡಬೇಕು. ಮೇಲ್ವಿಚಾರಕಿಯರು ಪ್ರತಿ ತಿಂಗಳು ಹಿಂಬಾಕಿ ಹಣದಲ್ಲಿ ₹ 1000ದಿಂದ ₹ 3ಸಾವಿರ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಬಹಳ ಅನ್ಯಾಯವಾಗುತ್ತಿದ್ದು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

‘ಗೌರವಧನ, ಕೇಂದ್ರಗಳ ಬಾಡಿಗೆ ಹಣ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಖರೀದಿ ಅನುದಾನವನ್ನು ಪ್ರತಿ ತಿಂಗಳ 5ನೇ ತಾರೀಖಿನ ಒಳಗೆ ಕೊಡಬೇಕು. ಕಾರ್ಯಕರ್ತೆಯರಿಗೆ ಗೋವಾ ಮಾದರಿಯಲ್ಲಿ ₹ 18ಸಾವಿರ ಗೌರವಧನ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಅಧ್ಯಕ್ಷ ನಾಗೇಶ ಎಂ. ಸಾತೇರಿ, ಉಪಾಧ್ಯಕ್ಷರಾದ ಯಲ್ಲೂಭಾಯಿ ಶೀಗಿಹಳ್ಳಿ, ಮೀನಾಕ್ಷಿ ಕೋಟಗಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.