ADVERTISEMENT

ಸಾವಳಗಿ: ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 13:16 IST
Last Updated 7 ಜುಲೈ 2021, 13:16 IST
ಸಾವಳಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೆಎಂಎಫ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ ಬುಧವಾರ ಚಾಲನೆ ನೀಡಿದರು
ಸಾವಳಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೆಎಂಎಫ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ ಬುಧವಾರ ಚಾಲನೆ ನೀಡಿದರು   

ಸಾವಳಗಿ (ಬೆಳಗಾವಿ ಜಿಲ್ಲೆ): ಗ್ರಾಮದಲ್ಲಿ ₹ 1.50 ಕೋಟಿ ವೆಚ್ಚದಲ್ಲಿ ಮೂರು ಸಮುದಾಯ ಭವನ ಹಾಗೂ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಬುಧವಾರ ಚಾಲನೆ ನೀಡಿದರು.

ಸಾವಳಗಿಯಿಂದ ರೈಲು ನಿಲ್ದಾಣದವರೆಗೆ ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿ, ‘ಲಾಕ್‍ಡೌನ್ ಸಡಿಲಿಕೆ ನಂತರ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಇದು ಸಲ್ಲದು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮಾಸ್ಕ್‌ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಗ್ರಾಮ ಪಂಚಾಯ್ತಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.