ADVERTISEMENT

ಅಲ್ಪಸಂಖ್ಯಾತರಿಗೆ ಸಾಲ ಸೌಲಭ್ಯ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 14:36 IST
Last Updated 21 ಅಕ್ಟೋಬರ್ 2020, 14:36 IST
ಎಂ.ಜಿ. ಹಿರೇಮಠ
ಎಂ.ಜಿ. ಹಿರೇಮಠ   

ಬೆಳಗಾವಿ: ‘ಕೃಷಿ ಅಭಿವೃದ್ಧಿ ಬ್ಯಾಂಕ್‌ನಿಂದ ಶೇ.3ರ ಬಡ್ಡಿ ದರದಲ್ಲಿ ₹10 ಲಕ್ಷದವರೆಗೆ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದಶೂನ್ಯ ಬಡ್ಡಿ ದರದಲ್ಲಿ ₹ 3 ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸುವ ಯೋಜನೆ ಇದ್ದು, ಅದನ್ನು ಅಲ್ಪಸಂಖ್ಯಾತ ಸಮುದಾಯದವರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಬುಧವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 2020-21ನೇ ಸಾಲಿನ 2ನೇ ತ್ರೈಮಾಸಿಕದ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗೆ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಯಾವುದೇ ಇಲಾಖೆಯ ಯೋಜನೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶೇ 15ರಷ್ಟು ಮೀಸಲಾತಿ ಒದಗಿಸಬೇಕು. ನಿಗದಿತ ಗುರಿ ತಲುಪಲು ಪ್ರಚಾರ ಕಾರ್ಯ ಕೈಗೊಳ್ಳಬೇಕು’ ಎಂದರು.

ADVERTISEMENT

ಮಹಾನಗರ ಪಾಲಿಕ ಉಪ ಆಯುಕ್ತ (ಆಡಳಿತ) ಶಬ್ಬೀರ್ ಘಂಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ಲಮಾಣಿ, ನಾಮನಿರ್ದೆಶನ ಸದಸ್ಯರಾದ ಅಕ್ಬರ್ ಅಲಿ ಮಾರೂಫ, ಜಿಲ್ಲಾ ಪಂಚಾಯಿತಿ ಸದಸ್ಯ ಅಬ್ದುಲರವೂಫ್ ಬಾಗೇವಾಡಿ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.