ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
‘ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ವೀರಶೈವ ಲಿಂಗಾಯತ ಸಮುದಾಯದವರಿಗೆ ಪ್ರತ್ಯೇಕ ರುದ್ರಭೂಮಿ ವ್ಯವಸ್ಥೆ ಮಾಡಬೇಕು. ಬಸವೇಶ್ವರರ ಕಂಚಿನ ಮೂರ್ತಿಯನ್ನು ಗೋವಾವೇಸ್ ವೃತ್ತದಲ್ಲಿ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.
ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಮುಖಂಡರಾದ ಎಂ.ಬಿ. ಝಿರಲಿ, ಚಂದ್ರಶೇಖರ ಬೆಂಬಳಗಿ, ಅಣ್ಣಾಸಾಹೇಬ ಕೊರಬು, ರಮೇಶ ಕಳಸಣ್ಣನವರ, ಪ್ರಕಾಶ ಬಾಳೆಕುಂದ್ರಿ, ಸಚಿನಕುಮಾರ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.