ADVERTISEMENT

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ಬೆಳಗಾವಿಯಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 4:55 IST
Last Updated 30 ಸೆಪ್ಟೆಂಬರ್ 2020, 4:55 IST
ಬಾಬರಿ ಮಸೀದಿ
ಬಾಬರಿ ಮಸೀದಿ   

ಬೆಳಗಾವಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಸಿಬಿಐ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಲಿರುವ ಕಾರಣದಿಂದ, ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಾಲ್ವರು ಎಸಿಪಿಗಳು, 19 ಇನ್ ಸ್ಪೆಕ್ಟರ್ ಗಳು, 24 ಪಿಎಸ್ಐಗಳು, 78 ಎಎಸ್ಐಗಳು, 632 ಹೆಡ್ ಕಾನ್ ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ ಗಳು, 12 ಸಿಎಆರ್ ಮತ್ತು 2 ಕೆ ಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ವದಂತಿ ಹರಡದಂತೆ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT