ADVERTISEMENT

ವಿಎಚ್‌ಪಿಯಿಂದ ಮಠ–ಮಂದಿರ ರಕ್ಷಣೆ: ರುದ್ರಕೇಸರಿ ಮಠದ ಹರಿಗುರು ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 11:31 IST
Last Updated 16 ಆಗಸ್ಟ್ 2020, 11:31 IST
ಬೆಳಾವಿಯಲ್ಲಿ ವಿಶ್ವ ಹಿಂದೂ ಪರಿಷತ್– ಬಜರಂಗ ದಳದಿಂದ ಈಚೆಗೆ ನಡೆದ ‘ಅಖಂಡ ಭಾರತ ಸಂಕಲ್ಪ ದಿವಸ್’ ಕಾರ್ಯಕ್ರಮವನ್ನು ರುದ್ರಕೇಸರಿ ಮಠದ ಹರಿಗುರು ಸ್ವಾಮೀಜಿ ಉದ್ಘಾಟಿಸಿದರು
ಬೆಳಾವಿಯಲ್ಲಿ ವಿಶ್ವ ಹಿಂದೂ ಪರಿಷತ್– ಬಜರಂಗ ದಳದಿಂದ ಈಚೆಗೆ ನಡೆದ ‘ಅಖಂಡ ಭಾರತ ಸಂಕಲ್ಪ ದಿವಸ್’ ಕಾರ್ಯಕ್ರಮವನ್ನು ರುದ್ರಕೇಸರಿ ಮಠದ ಹರಿಗುರು ಸ್ವಾಮೀಜಿ ಉದ್ಘಾಟಿಸಿದರು   

ಬೆಳಗಾವಿ: ‘ಮಠ-ಮಂದಿರಗಳು ಹಾಗೂ ಗೋವುಗಳ ರಕ್ಷಣೆಯಲ್ಲಿ ವಿಶ್ವ ಹಿಂದೂ ಪರಿಷತ್- ಬಜರಂಗ ದಳ ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ಇಲ್ಲಿನ ರುದ್ರಕೇಸರಿ ಮಠದ ಹರಿಗುರು ಸ್ವಾಮೀಜಿ ಹೇಳಿದರು.

ವಿಶ್ವ ಹಿಂದೂ ಪರಿಷತ್–ಬಜರಂಗ ದಳದ ವತಿಯಿಂದ ಈಚೆಗೆ ನಡೆದ ‘ಅಖಂಡ ಭಾರತ ಸಂಕಲ್ಪ ದಿವಸ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಸಂಘಟನೆಯ ಕಾರ್ಯಕರ್ತರು ಕುಟುಂಬ ನಿರ್ವಹಣೆಯ ಜೊತೆಗೆ ಸಮಾಜದ ಜವಾಬ್ದಾರಿಯನ್ನೂ ಸಂಕಲ್ಪವಾಗಿ ಸ್ವೀಕರಿಸಿದ್ದಾರೆ. ಲವ್ ಜಿಹಾದ್ ತಡೆಯಲು ಶ್ರಮಿಸುತ್ತಿದ್ದಾರೆ’ ಎಂದರು.

ADVERTISEMENT

ಜಿಲ್ಲಾ ಸಂಯೋಜಕ ಬಾವುಕಣ್ಣ ಲೋಹಾರ, ‘ಬೆಂಗಳೂರಿನಲ್ಲಿ ನಡೆದ ಗಲಭೆಯಂತಹ ಘಟನೆಗಳು ಮುಂದುವರಿದರೆ ಸಂಘಟನೆಯ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ. ಪರಿಣಾಮ ತೀವ್ರವಾಗಿರುತ್ತದೆ’ ಎಂದು ಹೇಳಿದರು.

ನಗರ ಘಟಕದ ಅಧ್ಯಕ್ಷ ಬಸವರಾಜ ಬಾಬೂಜಿ ಮಾತನಾಡಿ, ‘ಮುಂದಿನ ದಿನಗಳಲ್ಲಿ ಭಾರತ ಅಖಂಡ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಒಂದೆಡೆ ಪಾಕಿಸ್ತಾನ ಇನ್ನೊಂದೆಡೆ ಚೀನಾ ನಮ್ಮ ದೇಶದ ಮೇಲೆ ಆಕ್ರಮಣ ಮಾಡುತ್ತಿವೆ. ಅಪಾಯಕಾರಿ ಚೀನಾ ನಮ್ಮ ಗಡಿಯೊಳಗೆ ಬರುವ ಸಾಹಸ ಮಾಡುತ್ತಿದೆ. ಇದನ್ನು ಎದುರಿಸಲು ನಮ್ಮ ಸೈನಿಕರ ಆತ್ಮಬಲ ಹೆಚ್ಚಿಸುವ ಕೆಲಸವನ್ನು ನಾವು ಮಾಡಬೇಕು. ಆತ್ಮನಿರ್ಭರ ಭಾರತಕ್ಕಾಗಿ ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು. ಸ್ವದೇಶಿ ಚಿಂತನೆ ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರಾಂತ ಕೋಶಾಧ್ಯಕ್ಷರಾದ ಕೃಷ್ಣ ಭಟ್, ಶ್ರೀಕಾಂತ ಕದಂ, ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಚಳಕೇರಿ, ಕಾರ್ಯದರ್ಶಿ ವಿಜಯ ಜಾಧವ, ನಗರ ಘಟಕದ ಕಾರ್ಯದರ್ಶಿ ಹೇಮಂತ ಹವಳ, ನಗರ ಘಟಕದ ಸಂಯೋಜಕ ಆದಿನಾಥ ಗಾವಡೆ, ಬಸವರಾಜ ಹಳಿಂಗಳಿ, ಬಸವರಾಜ ಗಾಣಿಗಿ, ಆನಂದ ಕರಲಿಂಗನ್ನವರ, ಶ್ಯಾಮ ಬತ್ತುಲ್ಕರ, ಅರ್ಜುನ ರಜಪೂತ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.