ADVERTISEMENT

ಬಿಜೆಪಿಗೆ ಗೆಲವು; ದೆಹಲಿಯಲ್ಲಿ ಅಭಿವೃದ್ಧಿ ಪರ್ವ ಆರಂಭ: ಈರಣ್ಣ ಕಡಾಡಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2025, 14:11 IST
Last Updated 8 ಫೆಬ್ರುವರಿ 2025, 14:11 IST
ಈರಣ್ಣ ಕಡಾಡಿ
ಈರಣ್ಣ ಕಡಾಡಿ   

ಮೂಡಲಗಿ: ದೆಹಲಿಯ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನೀಡಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭಗೊಂಡಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

‘ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಅಧಿಕಾರಕ್ಕೆ ಬಂದಿದ್ದ ಆಮ್‌ ಆದ್ಮಿ ಪಕ್ಷದ ಸಚಿವ ಸಂಪುಟದ ಹಲವು ಸಚಿವರು, ಭ್ರಷ್ಟಾಚಾರದಿಂದ ಕಳಂಕಿತರಾಗಿ ಜೈಲು ಪಾಲಾಗಿದ್ದು ಅತ್ಯಂತ ವಿಪರ್ಯಾಸದ ಸಂಗತಿಯಾಗಿದೆ. ಸುಳ್ಳಿನ ಅರಮನೆ ನಿರ್ಮಿಸಿ ಅಧಿಕಾರಕ್ಕೆ ಬಂದಿದ್ದ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನಿಷ ಸಿಸೋಡಿಯಾ ಅವರನ್ನು ಸೋಲಿಸುವ ಮೂಲಕ ದೆಹಲಿ ಜನರು ಅವರ ಮುಖವಾಡ  ಬಯಲು ಮಾಡಿದ್ದಾರೆ. ದೆಹಲಿಯಲ್ಲಿ ಬಿಜೆಪಿಯ ಗೆಲುವು ಪಕ್ಷದ ಜನಪ್ರಿಯತೆಯನ್ನು ಸೂಚಿಸುತ್ತದೆ. ಕೇಂದ್ರ ಸರ್ಕಾರಕ್ಕೆ ಮತ್ತಷ್ಟು ಬಲ ತಂದಿದೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT