ADVERTISEMENT

ವಿಜಯಕುಮಾರ ನೂತನ ಸಿಸಿಎಫ್‌

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 8:39 IST
Last Updated 18 ಸೆಪ್ಟೆಂಬರ್ 2021, 8:39 IST
ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯಕುಮಾರ ಸಾಲಿಮಠ ಅವರನ್ನು ಪರಿಸರ ಮತ್ತು ವನ್ಯಜೀವಿ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಸುರೇಶ ಉರಬಿನಟ್ಟಿ ಸತ್ಕರಿಸಿದರು. ಕಾರ್ಯದರ್ಶಿ ಡಾ.ಡಿ.ಎನ್. ಮಿಸಾಳೆ, ಸಂಘಟನಾ ಕಾರ್ಯದರ್ಶಿ ಜಗದೀಶ ಮಠದ ಮತ್ತು ಉಪಾಧ್ಯಕ್ಷ ಶ್ರೀಶೈಲ ಮಠದ ಇದ್ದಾರೆ

ಬೆಳಗಾವಿ: ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವಿಜಯಕುಮಾರ ಸಾಲಿಮಠ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ವಿಜಯಪುರ ಜಿಲ್ಲೆಯವರಾದ ಅವರು ಪಶ್ಚಿಮ ಬಂಗಾಳ ಕೇಡರ್‌ನ 2003ನೇ ಐಎಫ್‌ಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಸಿಸಿಎಫ್‌ಯಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಆಗಿದ್ದರು.

ಅವರನ್ನು ಇಲ್ಲಿನ ಪರಿಸರ ಮತ್ತು ವನ್ಯಜೀವಿ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಸುರೇಶ ಉರಬಿನಟ್ಟಿ, ಉಪಾಧ್ಯಕ್ಷ ಶ್ರೀಶೈಲ ಮಠದ, ಕಾರ್ಯದರ್ಶಿ ಡಾ.ಡಿ.ಎನ್. ಮಿಸಾಳೆ, ಸಂಘಟನಾ ಕಾರ್ಯದರ್ಶಿ ಜಗದೀಶ ಮಠದ, ಶಿವನಪ್ಪ ಕಾಮತ ಸನ್ಮಾನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.