ADVERTISEMENT

ವಿನಯ್‌ ಕುಲಕರ್ಣಿ ಬಿಡುಗಡೆ ವೇಳೆ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 10:09 IST
Last Updated 21 ಆಗಸ್ಟ್ 2021, 10:09 IST
ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ವಿನಯ ಕುಲಕರ್ಣಿಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು
ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ವಿನಯ ಕುಲಕರ್ಣಿಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು   

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಆವರಣದಲ್ಲಿ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಬಿಡುಗಡೆ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 300 ಮಂದಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ಶನಿವಾರ ದಾಖಲಾಗಿವೆ.

ವಾರಾಂತ್ಯ ಕರ್ಫ್ಯೂ ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಒಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಿಂಡಲಗಾ ಗ್ರಾಮ ಪಂಚಾಯ್ತಿ ಪಿಡಿಒ ಕೂಡ ದೂರು ನೀಡಿದ್ದಾರೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ‌ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.