ADVERTISEMENT

ಮಲ್ಲೂರ: ಸ್ವಾಮಿ ವಿವೇಕಾನಂದ ಜಯಂತಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 12:07 IST
Last Updated 13 ಜನವರಿ 2022, 12:07 IST
ಮಲ್ಲೂರ ಗ್ರಾಮದ ಸ್ವಾಮಿ ವಿವೇಕಾನಂದ ಯುವ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ‍ಪ್ರಗತಿಪರ ಕೃಷಿಕರಾದ ಕವಿತಾ ಮಿಶ್ರಾ ಉದ್ಘಾಟಿಸಿದರು
ಮಲ್ಲೂರ ಗ್ರಾಮದ ಸ್ವಾಮಿ ವಿವೇಕಾನಂದ ಯುವ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ‍ಪ್ರಗತಿಪರ ಕೃಷಿಕರಾದ ಕವಿತಾ ಮಿಶ್ರಾ ಉದ್ಘಾಟಿಸಿದರು   

ಮಲ್ಲೂರ: ಗ್ರಾಮದ ಸ್ವಾಮಿ ವಿವೇಕಾನಂದ ಯುವ ಸಂಘಟನೆ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಗತಿಪರ ಕೃಷಿಕರಾದ ಕವಿತಾ ಮಿಶ್ರಾ ಬಸವ ಧ್ವಜಾರೋಹಣ ನೆರವೇರಿಸಿ, ಸ್ಥಳೀಯರೊಂದಿಗೆ ಸಂವಾದ ನಡೆಸಿದರು. ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳುವುದು ಹೇಗೆ ಎನ್ನುವ ಕುರಿತು ಮಾಹಿತಿ ನೀಡಿದರು. ಅನುಭವ ಹಂಚಿಕೊಂಡರು.

ಕಾರ್ಯಕ್ರಮ ಉದ್ಘಾಟಿಸಿದ ಸವದತ್ತಿ ಪಿಎಸ್‌ಐ ಶಿವಾನಂದ, ‘ಯುವಕರು ದುಶ್ಚಟಗಳಿಂದ ದೂರವಿರಬೇಕು. ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಯಕ್ಕುಂಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ವೈ.ಎಂ. ಯಾಕೊಳ್ಳಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ನೌಕರಿ ಹಿಡಿದವರ ತಂದೆ–ತಾಯಂದಿರನ್ನು ಸನ್ಮಾನಿಸಲಾಯಿತು. ಎಸ್‌.ಆರ್‌. ಕರಡಿ ಇದ್ದರು.

ವಿ.ಬಿ. ತವಗಮಠ ಸ್ವಾಗತಿಸಿದರು. ಆರ್‌.ಎಸ್. ಸಣಮನಿ ನಿರೂಪಿಸಿದರು. ನಾಗಪ್ಪ ಪೆಂಟೇದ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.