ADVERTISEMENT

ಬೆಳಗಾವಿ | ಜವಾಬ್ದಾರಿಯಿಂದ ಮತ ಚಲಾಯಿಸಿ: ಸಂದೀಪ ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 4:40 IST
Last Updated 26 ಜನವರಿ 2026, 4:40 IST
ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಂದೀಪ ಪಾಟೀಲ ಉದ್ಘಾಟಿಸಿದರು
ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಂದೀಪ ಪಾಟೀಲ ಉದ್ಘಾಟಿಸಿದರು   

ಬೆಳಗಾವಿ: ‘ಮತದಾನ ಹಕ್ಕಷ್ಟೇ ಅಲ್ಲ. ಬದಲಿಗೆ ದೇಶದ ಪ್ರಗತಿಗೆ ನಿರ್ವಹಿಸಬೇಕಾದ ಪವಿತ್ರ ಕರ್ತವ್ಯ. ನಿರ್ಣಾಯಕವಾದ ಪ್ರತಿ ಮತ ಜವಾಬ್ದಾರಿಯಿಂದ ಚಲಾಯಿಸಿ, ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಹೇಳಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ 16ನೇ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳು ತಪ್ಪದೆ ಪಾಲ್ಗೊಳ್ಳಬೇಕು. ಯಾವ ಆಮಿಷಕ್ಕೂ ಜನ ಮತ ಮಾರಿಕೊಳ್ಳಬಾರದು’ ಎಂದರು.

ADVERTISEMENT

ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಧೀಶ ಸುಭಾಷ ಸಂಕದ, ‘ಉತ್ತಮ ನಾಯಕರ ಆಯ್ಕೆಗಾಗಿ ಕಡ್ಡಾಯವಾಗಿ ಮತ ಚಲಾಯಿಸಬೇಕು’ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಉಪ ಆಯುಕ್ತ  ಉದಯಕುಮಾರ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹಾದೇವ ಕಾಂಬಳೆ ಇದ್ದರು.

ಇದಕ್ಕೂ ಮುಂಚೆ ವಿವಿಧ ಮಾರ್ಗಗಳಲ್ಲಿ ಜಾಗೃತಿ ಜಾಥಾ ಸಾಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.