ಯರಗಟ್ಟಿ: ‘ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಇಲ್ಲಿನ ಸಂವಿಧಾನ ನೀಡಿದ
ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು’ ಎಂದು ರೈತ ಸಂಘದ ಮುಖಂಡ ಈರಣಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಈಚೆಗೆ ನಡೆದ ಚುನಾವಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯೋಜನೆಯ ಧಾರವಾಡದ ಪ್ರಾದೇಶಿಕ ಯೋಜನಾಧಿಕಾರಿ ಭಸ್ಕರ್ ಎನ್. ಮಾತನಾಡಿ, ‘ಆಮಿಷಕ್ಕೆ ಬಲಿಯಾಗದೆ, ಈ ಬಗ್ಗೆ ಚುನಾವಣೆ ಅಧಿಕಾರಿಗಳು ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು’ ಎಂದರು.
ಧರ್ಮೇಂದ್ರ, ಹರೀಶ್, ಸತೀಶ, ಸಚಿನ, ಉಮೇಶ ಹಡಗಲಿ, ಸೋಮಶೇಖರ ಮುಗ್ಧಂ, ಲವಕುಮಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.